Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೇಸು ಪುನಃ ಅವನ ಕಣ್ಣುಗಳ ಮೇಲೆ ಕೈಯಿಟ್ಟರು. ಅವನು ಕಣ್ಣರಳಿಸಿ ನೋಡಿದಾಗ ಪೂರ್ಣ ದೃಷ್ಟಿಯನ್ನು ಹೊಂದಿದ್ದನು. ಎಲ್ಲವೂ ಅವನಿಗೆ ಸ್ಪಷ್ಟವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಆತನು ಅವನ ಕಣ್ಣುಗಳ ಮೇಲೆ ತಿರಿಗಿ ಕೈಯಿಟ್ಟನು; ಅವನು ಕಣ್ಣು ಬಿಟ್ಟು ನೋಡಲು ಅವನಿಗೆ ಗುಣವಾಗಿತ್ತು; ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸು ತನ್ನ ಕೈಗಳನ್ನು ಮತ್ತೆ ಕುರುಡನ ಕಣ್ಣುಗಳ ಮೇಲೆ ಇಟ್ಟನು. ಆಗ ಅವನು ತನ್ನ ಕಣ್ಣುಗಳನ್ನು ಅಗಲವಾಗಿ ತೆರೆದನು. ಅವನ ಕಣ್ಣುಗಳು ಗುಣಹೊಂದಿದ್ದವು. ಅವನಿಗೆ ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತರುವಾಯ ಯೇಸು ತಿರುಗಿ ಅವನ ಕಣ್ಣುಗಳ ಮೇಲೆ ತಮ್ಮ ಕೈಗಳನ್ನಿಟ್ಟರು. ಆಗ ಅವನು ಗುಣಹೊಂದಿದವನಾಗಿ ಎಲ್ಲವನ್ನೂ ಬಹುಸ್ಪಷ್ಟವಾಗಿ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆಜುನ್ ಅನಿ ಎಗ್ದಾ ಅಪ್ಲೊ ಹಾತ್ ತೆಚ್ಯಾ ಡೊಳ್ಯಾಕ್ನಿ ಲಾವ್ಲ್ಯಾನ್. ತೆಕಾ ಬರೆ ದಿಸುಕ್ ಲಾಗ್ಲೆ ತೆಚೆ ಡೊಳೆ ಸಮಾ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:25
9 ತಿಳಿವುಗಳ ಹೋಲಿಕೆ  

ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.


ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.


ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು.


ತರುವಾಯ ಆತನು, “ನೀನು ಊರೊಳಗೆ ಹೋಗಬೇಡ” ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.


ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.


ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು