Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಂತರ ಯೇಸು ಜನರನ್ನು ತನ್ನ ಬಳಿಗೆ ಕರೆದನು. ಆತನ ಶಿಷ್ಯರೂ ಅಲ್ಲಿದ್ದರು. ಯೇಸು ಅವರಿಗೆ, “ಯಾವನಿಗಾದರೂ ನನ್ನನ್ನು ಅನುಸರಿಸಲು ಮನಸ್ಸಿದ್ದರೆ, ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ಜೆಜುನ್ ಶಿಸಾಕ್ನಿ ಅನಿ ಸಗ್ಳ್ಯಾ ಲೊಕಾಕ್ನಿ ಅಪ್ನಾಕ್ಡೆ ಬಲ್ವುಲ್ಯಾನ್ ಅನಿ “ತುಮ್ಚ್ಯಾತ್ಲ್ಯಾ ಕೊನಾಕ್ ತರ್‍ಬಿ ಮಾಜ್ಯಾ ಫಾಟ್ನಾ ಯೆವ್ಕ್ ಮನ್ ರ್‍ಹಾಲ್ಲ್ಯಾರ್, ತೊ ಅಪ್ನಾಕುಚ್ ಇಸ್ರುಂದಿ, ಅಪ್ನಾಚೊ ಕುರಿಸ್ ಘೆಂವ್ದಿತ್, ಅನಿ ಮಾಜ್ಯಾ ಫಾಟ್ನಾ ಯೆಂವ್ದಿ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:34
43 ತಿಳಿವುಗಳ ಹೋಲಿಕೆ  

ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣ ಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ನನ್ನನ್ನು ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.


ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.


ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.


ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.


ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.


ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.


ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.


ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.


ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ


ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,


ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.


ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.


ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.


ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು.


ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.


ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.


ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,


ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು