Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಅವರು, “ ‘ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು - ಎಲೀಯನು ಮೊದಲು ಬಂದು ಎಲ್ಲವನ್ನು ತಿರಿಗಿ ಸರಿಮಾಡುವದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ - ಅವನು ಬಹು ಕಷ್ಟಗಳನ್ನನುಭವಿಸಿ ಹೀನೈಸಲ್ಪಡಬೇಕೆಂಬದಾಗಿ ಬರೆದದೆ, ಇದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ಜೆಜುನ್ “ಸಗ್ಳೆ ತಯಾರ್ ಕರುಕ್ ಮನುನ್ ಅದ್ದಿ ಎಲಿಯಾ ಯೆವ್ಕ್ ಪಾಜೆ, ಜಾಲ್ಯಾರ್‍ಬಿ, ಮಾನ್ಸಾಚ್ಯಾ ಲೆಕಾನ್ ಲೈ ಕಸ್ಟ್ ಸೊಸುಕ್ ಪಾಜೆ, ಅನಿ ತಿರಸ್ಕರಿತ್ ಹೊವ್ಕ್ ಪಾಜೆ, ಮನುನ್ ಪವಿತ್ರ್ ಪುಸ್ತಕ್ ಕಶ್ಯಾಕ್ ಮನ್ತಾ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:12
30 ತಿಳಿವುಗಳ ಹೋಲಿಕೆ  

ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.


ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ,


ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”


ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು.


ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.


ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೆಕೆಲ್ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.


ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.


ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು.


ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.


ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.


ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು


“ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು