ಮಾರ್ಕ 9:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಯೇಸು ಜನರ ಗುಂಪು ಓಡಿಬರುವದನ್ನು ಕಂಡು ಆ ದೆವ್ವವನ್ನು ಗದರಿಸಿ - ಎಲೇ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟುಹೋಗು; ಇನ್ನು ಮುಂದೆ ಹಿಡಿಯಬೇಡವೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಲೊಕಾಂಚೊ ತಾಂಡೊ ಅಪ್ನಾಕ್ಡೆ ಯೆವ್ನ್ ಜಮ್ತಲೆ ಜೆಜುನ್ ಬಗಟ್ಲ್ಯಾನ್. ತಸೆ ಮನುನ್ ತೆನಿ ತ್ಯಾ ಗಿರ್‍ಯಾಕ್ “ಯೆ, ಬೊಲಿನಸಿ ಸರ್ಕೆ ಅನಿ ಆಯ್ಕಿನಸಿ ಸರ್ಕೆ ಕರ್‍ತಲ್ಯಾ ಗಿರ್‍ಯಾ, ಹ್ಯಾ ಪೊರಾತ್ನಾ ಭಾಯ್ರ್ ಪಡ್ ಅನಿ ಕನ್ನಾಬಿ ತೆಚ್ಯಾ ಭುತ್ತುರ್ ಜವ್ನಕೊ!” ಮನುನ್ ತಾಕಿತ್ ದಿಲ್ಯಾನ್. ಅಧ್ಯಾಯವನ್ನು ನೋಡಿ |