ಮಾರ್ಕ 9:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943-44 ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಇದಲ್ಲದೆ ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿದ್ದು ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವದಕ್ಕಿಂತ ಕೈಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ತುಜೊ ಹಾತ್ ತುಜೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಜಾಲ್ಯಾರ್, ತೊ ಕಾತ್ರುನ್ ಕಾಡುನ್ ಸೊಡ್, ದೊನ್ ಹಾತಾ ಘೆವ್ನ್ ಕನ್ನಾಚ್ ಇಜಿನಸಲ್ಲಿ ಆಗ್ ಹೊತ್ತ್ಯಾ ನರ್ಕಾತ್ ಜಾತಲ್ಯಾಚ್ಯಾನ್ಕಿ, ಎಕ್ ಹಾತ್ ನಸ್ತಾನಾ ನಿರಂತರ್ ಜಿವನಾಕ್ ಜಾತಲೆ ಕವ್ಡೆಕಿ ಬರೆ. ಅಧ್ಯಾಯವನ್ನು ನೋಡಿ |
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.