Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಷ್ಟರಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಆಕಾಶವಾಣಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಮೋಡವು ಬಂದು, ಅವರನ್ನು ಮುಸುಕಿತು. ಆ ಮೋಡದ ಒಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ಈತನಿಗೆ ವಿಧೇಯರಾಗಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಎಕ್ ಮೊಡ್ ಯೆಲೆ ಅನಿ ತೆಚ್ಯಾ ಸಾವ್ಳಿನ್ ತೆಂಕಾ ಧಾಪ್ಲಿನ್, ಅನಿ ಮೊಡಾತ್ನಾ “ಹ್ಯೊ, ಮಾಜೊ ಲೈ ಅಪುರ್‍ಬಾಯೆಚೊ ಲೆಕ್, ತೆನಿ ಸಾಂಗಟಲ್ಲೆ ಆಯ್ಕಾ!” ಮನುನ್ ಧನ್ ಅಯ್ಕೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:7
41 ತಿಳಿವುಗಳ ಹೋಲಿಕೆ  

ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.


ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.


ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.


ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.


ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.


“ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.


ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.


ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.


ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.


ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.


ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.


ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.


ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.


ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.


ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.


ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು