ಮಾರ್ಕ 9:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದುಬರುವಾಗ, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ - ನೀವು ಕಂಡಿರುವದನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎದ್ದು ಬರುವತನಕ ಯಾರಿಗೂ ತಿಳಿಸಬಾರದೆಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೇಸು ಮತ್ತು ಆ ಶಿಷ್ಯರು ಹಿಂತಿರುಗಿ ಬೆಟ್ಟದಿಂದ ಕೆಳಗಿಳಿದು ಬರುತ್ತಿರುವಾಗ, ಆತನು ಅವರಿಗೆ, “ನೀವು ಬೆಟ್ಟದ ಮೇಲೆ ನೋಡಿದ ಸಂಗತಿಗಳ ಬಗ್ಗೆ ಯಾರಿಗೂ ಹೇಳಬೇಡಿ. ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬರುವವರೆಗೆ ಕಾದುಕೊಂಡಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೆನಿ ಮಡ್ಡಿ ವೈಯ್ನಾ ಉತ್ರುನ್ ಯೆತಾನಾ “ಮಾನ್ಸಾಚೊ ಲೆಕ್ ಮರುನ್, ಅನಿ ಪರ್ತುನ್ ಝಿತ್ತೊ ಹೊವ್ನ್ ಉಟುನ್ ಯೆಯ್ ಪತರ್ ತುಮಿ ಮಡ್ಡಿ ವರ್‍ತಿ ಬಗಟಲ್ಲೆ ಕೊನಾಕ್ಬಿ ಸಾಂಗುನಕಾಸಿ” ಮನುನ್ ತಾಕಿತ್ ದಿಲ್ಯಾನ್. ಅಧ್ಯಾಯವನ್ನು ನೋಡಿ |