Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಶಾಫೀರಿನವರೇ, ಬೆತ್ತಲೆಯಾಗಿ ಲಜ್ಜೆಗೆಟ್ಟು ತೊಲಗಿರಿ. ಚಾನಾನಿನವರಿಗೆ ಹೊರಬರಲು ಧೈರ್ಯವಿಲ್ಲ. ಬೇತೇಲಿನವರ ಗೋಳಾಟ ಕೇಳಿಬಂದಾಗ, ಅಲ್ಲಿ ನಿಮಗೆ ಆಶ್ರಯವಿಲ್ಲವೆಂದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ; ಚಾನಾನಿನವರು ಹೊರಡರು; ಬೇತೇಚೆಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಶಾಫೀರ್‌ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್‌ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಶಾಫೀರಿನ ನಿವಾಸಿಯೇ, ನಗ್ನತೆಯಿಂದಲೂ ನಾಚಿಕೆಯಿಂದಲೂ ಹಾದುಹೋಗಿರಿ, ಚಾನಾನಿನಲ್ಲಿ ವಾಸಿಸುವವರು ಹೊರಗೆ ಬರುವುದಿಲ್ಲ, ಬೇತ್ ಎಚೆಲು ನರಳುತ್ತಿದೆ. ಅದು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:11
12 ತಿಳಿವುಗಳ ಹೋಲಿಕೆ  

ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧವಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು.


ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.


ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು.


ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.


ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.


ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ, ಅಡವಿಯಲ್ಲಿನ ಜಾಲಿಯಂತಿರಿ.


“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ, ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು.


ಚೆನಾನ್, ಹದಾಷಾ, ಮಿಗ್ದಲ್ಗಾದ್,


ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು