Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದಕಾರಣ ನೀವು ಮೋರೆಷತ್ ಗತ್ ಊರಿಗೆ ಬಳುವಳಿ ಕೊಡಬೇಕಾಗುವುದು. ಅಕ್ಜೀಬಿನ ಮನೆಗಳಿಂದ ಇಸ್ರಾಯೇಲಿನ ಅರಸರಿಗೆ ಮೋಸವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದಕಾರಣ ನೀವು ಮೋರೆತಷತ್‍ಗಾತ್ ಪಟ್ಟಣ ನಿವಾಸಿಗಳಿಗೆ ಕಪ್ಪಕಾಣಿಕೆಯಿತ್ತು ಬೀಳ್ಕೊಡಬೇಕಾಗುವುದು. ಇಸ್ರಯೇಲಿನ ಅರಸರಿಗೆ ಅಕ್ಜೀಬಿನ ಮನೆತನದವರಿಂದ ವಂಚನೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದಕಾರಣ ನೀವು ಮೋರೆಷತ್‍ಗತ್ ಊರಿಗೆ ಬಳುವಳಿ ಕೊಡಬೇಕಾಗುವದು; ಅಕ್ಜೀಬಿನ ಮನೆಗಳಿಂದ ಇಸ್ರಾಯೇಲಿನ ಅರಸರಿಗೆ ಮೋಸವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಗತ್‌ನಲ್ಲಿರುವ ಮೋರೆಷತ್‌ಗೆ ಬೀಳ್ಕೊಡುವ ಕಾಣಿಕೆಗಳನ್ನು ಕೊಡು. ಅಕ್ಜೀಬಿನ ಕುಟುಂಬಗಳು ಇಸ್ರೇಲ್ ಅರಸರನ್ನು ಮೋಸಪಡಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗಿರುವುದರಿಂದ ಮೋರೆಶತ್ ಗತ್ ಊರಿಗೆ ಅಗಲಿ ಹೋಗುವ ಕಾಣಿಕೆಗಳನ್ನು ಕೊಡುವೆ. ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಮೋಸಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:14
10 ತಿಳಿವುಗಳ ಹೋಲಿಕೆ  

ಅಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.


ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು