ಮೀಕ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದಕ್ಕೆಲ್ಲಾ ಕಾರಣ ಯಕೋಬನ ದ್ರೋಹ. ಇಸ್ರಯೇಲ್ ಮನೆತನದ ಪಾಪ. ಯಕೋಬನ ದ್ರೋಹಕ್ಕೆ ಕಾರಣ ಯಾವುದು? ಸಮಾರ್ಯ ಅಲ್ಲವೆ? ಜುದೇಯದ ವಿಗ್ರಹಾರಾಧನೆಯ ಸ್ಥಳ ಯಾವುದು? ಜೆರುಸಲೇಮ್ ಅಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಕ್ಕೆಲ್ಲಾ ಕಾರಣವು ಯಾಕೋಬಿನ ದ್ರೋಹವೇ, ಇಸ್ರಾಯೇಲ್ ವಂಶದ ಪಾಪಗಳೇ, ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ. ಯೆಹೂದದ [ಕೆಟ್ಟ] ಪೂಜಾಸ್ಥಾನಗಳು ಯಾವವು? ಯೆರೊಸಲೇಮಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದಕ್ಕೆಲ್ಲಾ ಕಾರಣ ಯಾಕೋಬನ ಪಾಪಗಳೇ, ಇಸ್ರೇಲರ ದ್ರೋಹಗಳೇ! ಯಾಕೋಬು ಪಾಪಮಾಡಿದ್ದಕ್ಕೆ ಕಾರಣವೇನು? ಸಮಾರ್ಯವೇ ಕಾರಣ. ಯೆಹೂದದ ಎತ್ತರವಾದ ಸ್ಥಳ ಯಾವುದು? ಅದೇ ಜೆರುಸಲೇಮ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? ಯೆಹೂದದ ಉನ್ನತ ಪೂಜಾಸ್ಥಳ ಯಾವುದು? ಅದು ಯೆರೂಸಲೇಮು ಅಲ್ಲವೋ? ಅಧ್ಯಾಯವನ್ನು ನೋಡಿ |