Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದಕಾರಣ, “ನಾನು ಸಮಾರ್ಯವನ್ನು ಧೂಳಿನ ರಾಶಿಯನ್ನಾಗಿಯೂ ದ್ರಾಕ್ಷಾತೋಟಕ್ಕೆ ಒಳ್ಳೆಯ ಬಯಲನ್ನಾಗಿಯೂ ಮಾಡುವೆನು. ಕಲ್ಲುಹೆಂಟೆಗಳನ್ನು ಕಣಿವೆಗೆ ಸುರಿದುಬಿಡುವೆನು. ಅದರ ತಳಪಾಯವೇ ತೆರೆದು ಕಾಣುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ ದ್ರಾಕ್ಷೆಯ ತೋಟದ ಮಡಿಗಳನ್ನಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿಗೆ ಸುರಿದು ಬಿಡುವೆನು; ಅದರ ಅಸ್ತಿವಾರಗಳನ್ನು ಬೈಲುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಿಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಕೇವಲ ಅಸ್ತಿವಾರಗಳು ಕಾಣುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬವನ್ನಾಗಿಯೂ ದ್ರಾಕ್ಷಿಬಳ್ಳಿ ನೆಡುವ ಸ್ಥಳವನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು, ಅದರ ಅಸ್ತಿವಾರಗಳನ್ನು ಹೊರಗೆಡಹುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:6
19 ತಿಳಿವುಗಳ ಹೋಲಿಕೆ  

ನೀವು ಸುಣ್ಣಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.


ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.


ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?


ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.


ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.


ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.


ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು.


ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.


ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು.


ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.


ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು.


ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು.


ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು.


ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು