Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಕ್ಕಾಗಿ ನಾನು ಅರಿಚಾಟ ಕಿರಿಚಾಟ ಮಾಡುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ನಡೆಯುವೆನು; ನರಿಗಳಂತೆ ಅರಚಿಕೊಳ್ಳುವೆನು, ಉಷ್ಟ್ರಪಕ್ಷಿಗಳ ಹಾಗೆ ಕಿರಚಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮುಂದೆ ಸಂಭವಿಸುವ ಘಟನೆಗಳ ಬಗ್ಗೆ ನಾನು ಬಹಳ ದುಃಖಿತನಾಗಿದ್ದೇನೆ. ನಾನು ಬಟ್ಟೆಯನ್ನಾಗಲಿ ಚಪ್ಪಲಿಯನ್ನಾಗಲಿ ಹಾಕಿಕೊಳ್ಳದೇ ಹೋಗುವೆನು. ನಾಯಿಯಂತೆ ಅಳುವೆನು, ಪಕ್ಷಿಯಂತೆ ಗೋಳಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ನಾನು ಗೋಳಾಡಿ ಅರಚುವೆನು. ಬರಿಗಾಲಿನಲ್ಲಿಯೂ ಬೆತ್ತಲೆಯಾಗಿಯೂ ಹೋಗುವೆನು. ನರಿಗಳ ಹಾಗೆ ಕೂಗುವೆನು, ಉಷ್ಟ್ರಪಕ್ಷಿಯಂತೆ ನರಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:8
19 ತಿಳಿವುಗಳ ಹೋಲಿಕೆ  

ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.


‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.


ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.


ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು. ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ.


ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು.


ಅಡವಿಯ ಬಕಪಕ್ಷಿಯಂತಿದ್ದೇನೆ; ಹಾಳೂರಿನ ಗೂಬೆಯಂತಿದ್ದೇನೆ.


ನಾನು ನರಿಗಳ ತಮ್ಮನೂ, ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ.


ಅಲ್ಲಿಗೆ ಸೇರಿದ ಮೇಲೆ ಅವನು ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪ್ರವಾದಿಸುತ್ತಾ, ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಇದರಿಂದ “ಸೌಲನೂ ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ” ಎಂಬ ಮಾತು ಪ್ರಚಲಿತವಾಯಿತು.


ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.


ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


“ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು. ‘ಅಯ್ಯೋ, ನಾವು ತೀರಾ ಸೂರೆಹೋದೆವಲ್ಲಾ ಯೆಹೋವನು ನಮ್ಮವರ ಸ್ವತ್ತನ್ನು ಪರಾಧೀನಮಾಡುತ್ತಿದ್ದಾನೆ. ಅಯ್ಯೋ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ, ನಮ್ಮ ಭೂಮಿಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ’” ಎಂದು ಶೋಕಗೀತವಾಗಿ ಹಾಡುವರು.


ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು