ಮೀಕ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಗಾಳಿಯನ್ನೂ ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು - ನಾನು ದ್ರಾಕ್ಷಾರಸಮದ್ಯಗಳ ವಿಷಯವಾಗಿ ನಿನಗೆ ಪ್ರವಾದನೆಮಾಡುವೆನು ಎಂದು ಹೇಳಿದರೆ ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು. ಅಧ್ಯಾಯವನ್ನು ನೋಡಿ |