ಮೀಕ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರವಿುಸಿಕೊಳ್ಳುತ್ತಾರೆ, ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ; ಮನೆಯನ್ನೂ ಮನೆಯವನನ್ನೂ ಸ್ವಾಸ್ತ್ಯವನ್ನೂ ಸ್ವಾಸ್ತ್ಯದವನನ್ನೂ ತುಳಿದುಬಿಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರಿಗೆ ಹೊಲಗದ್ದೆಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಅವರಿಗೆ ಮನೆಮಠಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಒಬ್ಬನಿಗೆ ಮೋಸಮಾಡಿ ಅವನ ಮನೆಯನ್ನು ಕಿತ್ತುಕೊಳ್ಳುವರು. ಇನ್ನೊಬ್ಬನಿಗೆ ಮೋಸಮಾಡಿ ಅವನ ಹೊಲಗದ್ದೆಗಳನ್ನು ಕಿತ್ತುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.