ಮೀಕ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ; ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವದಕ್ಕಾಗದು; ಅದು ಕೆಟ್ಟಕಾಲವೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ: “ನೋಡಿ, ನಾನು ಈ ಕುಟುಂಬದ ವಿರುದ್ಧವಾಗಿ ಸಂಕಟ ತರಲು ಯೋಚಿಸುತ್ತಿದ್ದೇನೆ. ನಿನ್ನನ್ನು ನೀನು ರಕ್ಷಿಸಲು ಸಾಧ್ಯವಿರುವುದಿಲ್ಲ. ಭಯಂಕರ ದಿವಸಗಳು ಬರುವದರಿಂದ ನೀನು ಉಬ್ಬಿಕೊಳ್ಳುವುದನ್ನು ನಿಲ್ಲಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ, “ಇಗೋ, ನಾನು ಈ ವಂಶಕ್ಕೆ ವಿರೋಧವಾಗಿ ನಾಶನವನ್ನು ಯೋಚಿಸುತ್ತೇನೆ. ಇದರಿಂದ ನೀವು ನಿಮ್ಮನ್ನು ರಕ್ಷಿಸಿಕೊಳ್ಳಲಾರಿರಿ. ಅಹಂಕಾರವಾಗಿ ನಡೆಯದೆ ಇರುವಿರಿ. ಇದು ವಿಪತ್ತಿನ ಕಾಲವೇ, ಅಧ್ಯಾಯವನ್ನು ನೋಡಿ |