Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಜನರ ಸ್ತ್ರೀಯರನ್ನು, ಅವರ ಪ್ರಿಯವಾದ ಮನೆಗಳಿಂದ ತಳ್ಳಿಹಾಕುತ್ತೀರಿ. ಅವರ ಸಣ್ಣ ಮಕ್ಕಳಿಗೆ ನನ್ನ ಆಶೀರ್ವಾದದ ಹಕ್ಕನ್ನು ಇನ್ನೆಂದಿಗೂ ಸಿಕ್ಕದಂತೆ ತಪ್ಪಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಜನಾಂಗಕ್ಕೆ ಸೇರಿದ ಮಹಿಳೆಯರನ್ನು ಪ್ರಿಯವಾದ ಅವರ ಗೃಹಗಳಿಂದ ಹೊರದಬ್ಬುತ್ತೀರಿ. ಅವರ ಹಸುಳೆಗಳಿಗೆ ನನ್ನ ಆಶೀರ್ವಾದ ಇನ್ನೆಂದಿಗೂ ಲಭಿಸದಂತೆ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಜನರ ಸ್ತ್ರೀಯರನ್ನು ಅವರ ಪ್ರಿಯವಾದ ಮನೆಗಳಿಂದ ತಳ್ಳಿಹಾಕುತ್ತೀರಿ. ಅವರ ಸಣ್ಣ ಮಕ್ಕಳಿಗೆ ನನ್ನ ಮಹಿಮೆಯ ಹಕ್ಕನ್ನು ಇನ್ನೆಂದಿಗೂ ಸಿಕ್ಕದಂತೆ ತಪ್ಪಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಜನರು ಸ್ತ್ರೀಯರ ಕೈಯಿಂದ ಅಂದವಾದ ಮನೆಗಳನ್ನು ಕಿತ್ತುಕೊಂಡಿದ್ದೀರಿ; ಅವರ ಚಿಕ್ಕಮಕ್ಕಳಿಂದ ನನ್ನ ಐಶ್ವರ್ಯವನ್ನು ನಿರಂತರಕ್ಕೂ ಕಿತ್ತುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನ ಜನರ ಸ್ತ್ರೀಯರನ್ನು ಅವರ ರಮ್ಯವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ. ಅವರ ಮಕ್ಕಳಿಂದ ನನ್ನ ಆಶೀರ್ವಾದವನ್ನು ಎಂದೆಂದಿಗೂ ತೆಗೆದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:9
14 ತಿಳಿವುಗಳ ಹೋಲಿಕೆ  

ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’


“ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.


ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.


ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ.


ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ. ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.


ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.


ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು