Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:11
39 ತಿಳಿವುಗಳ ಹೋಲಿಕೆ  

ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,


‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.


ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.


ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.


ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.


ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.


ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.


ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.


ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.


ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.


“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.


ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು.


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.


“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?


ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.


ಕೆಟ್ಟದ್ದನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.


“ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”


ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.


ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;


ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು