Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಂಗಹೀನ ಜನರನ್ನು ಉದ್ಧರಿಸಿ ಕಾಪಾಡುವೆನು. ಹೊರದೂಡಲಾದ ಪ್ರಜೆಯನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡುವೆನು. ಸರ್ವೇಶ್ವರ ಸಿಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರಿಗೆ ಅರಸರಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಕುಂಟುಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು; ಯೆಹೋವನು ಚೀಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರ ರಾಜನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಆ ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು. ಆ ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು. ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.” ಯೆಹೋವನು ಅವರ ಅರಸನಾಗುವನು. ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾಗಿಯೂ ಮಾಡುವೆನು. ಯೆಹೋವ ದೇವರು ಇಂದಿನಿಂದ ಸದಾಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:7
32 ತಿಳಿವುಗಳ ಹೋಲಿಕೆ  

ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.


ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.


ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು


ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.


ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.


ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು? ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ? ಹೌದು, ಚೀಯೋನೆಂಬಾಕೆಯು ಬೇನೆತಿಂದು ತನಗಾಗಿ ಮಕ್ಕಳನ್ನು ಹೆತ್ತಿದ್ದಾಳೆ.


ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”


ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.


ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.


ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು