Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು. ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀನು ಕೆತ್ತಿದ ವಿಗ್ರಹಗಳನ್ನು ಒಡೆದುಹಾಕಿ, ನೀನು ನಿಲ್ಲಿಸಿದ ಕಲ್ಲುಕಂಬಗಳನ್ನು ಉರುಳಿಸಿಬಿಡುವೆನು. ನಿನ್ನ ಕೈಗೆಲಸವಾದ ವಿಗ್ರಹಗಳನ್ನು ನೀನು ಪೂಜಿಸದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಮೂರ್ತಿಗಳನ್ನೂ ಕಲ್ಲುಕಂಬಗಳನ್ನೂ ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು, ನಿನ್ನ ಕೈ ರೂಪಿಸಿದ್ದನ್ನು ಇನ್ನು ಪೂಜಿಸದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ವಿಗ್ರಹಗಳನ್ನೂ ಕಲ್ಲುಕಂಬಗಳನ್ನೂ ಒಡೆದು ನಾಶಮಾಡುವೆನು. ನಿನ್ನ ಕೈಗಳು ಮಾಡಿದ ವಸ್ತುಗಳನ್ನು ನೀನು ಪೂಜಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ಸಹ ನಿನ್ನ ಮಧ್ಯದೊಳಗಿಂದ ಕಡಿದುಬಿಡುವೆನು. ಇನ್ನು ನಿನ್ನ ಸ್ವಂತ ಕೈಗಳು ರೂಪಿಸಿದ್ದನ್ನು ನೀನು ಆರಾಧಿಸದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:13
17 ತಿಳಿವುಗಳ ಹೋಲಿಕೆ  

ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.


ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.


ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.


ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.


ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.


“ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು