Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು, ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ಆಶೇರಾ ದೇವತೆಯ ವಿಗ್ರಹಗಳನ್ನು ಕಿತ್ತೊಗೆದು, ನಿನ್ನ ಪಟ್ಟಣಗಳನ್ನು ನೆಲಸಮ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನಿನ್ನ ಅಶೇರ ಸ್ತಂಭಗಳನ್ನೂ ಸುಳ್ಳು ದೇವರುಗಳನ್ನೂ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಅಶೇರ ಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:14
9 ತಿಳಿವುಗಳ ಹೋಲಿಕೆ  

ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.


ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.


ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.


ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.


ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;


ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.


ಆದರೆ ಯಾವ ಜನಾಂಗವು ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶ ಮಾಡುವೆನು ಎಂಬುದು ಯೆಹೋವನ ನುಡಿ” ಎಂದು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು