Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸ್ತ್ರೀಯು ತನ್ನ ಮಗನನ್ನು ಹೆರುವ ತನಕ ಯೆಹೋವನು ತನ್ನ ಜನರನ್ನು ತೊರೆದುಬಿಡುವನು. ಅನಂತರ ಉಳಿದ ಅವನ ಸಹೋದರರು ಇಸ್ರೇಲ್ ಜನರ ಬಳಿಗೆ ತಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಹೆರುವವಳು ಒಬ್ಬ ಮಗನನ್ನು ಹೆರುವ ಕಾಲದವರೆಗೂ ಇಸ್ರಾಯೇಲನ್ನು ಕೈಬಿಡಲಾಗುವುದು. ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲರ ಬಳಿಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:3
31 ತಿಳಿವುಗಳ ಹೋಲಿಕೆ  

ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.


“ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.


ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಉಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.


ನೀನು ತಿಂದರೂ ನಿನಗೆ ತೃಪ್ತಿಯಾಗದು. ಹಸಿವೆಯು ನಿನ್ನೊಳಗೆ ಇದ್ದೇ ಇರುವುದು. ನೀನು ನಿನ್ನವರನ್ನು ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ. ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು.


ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.


ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.


ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.


“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು