ಮೀಕ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು, ಅಧ್ಯಾಯವನ್ನು ನೋಡಿ |