Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನಗರದ ಸಭಿಕರೇ, ಕೇಳಿ! ಅಕ್ರಮವಾಗಿ ಗಳಿಸಿದ ಆಸ್ತಿ ದುರುಳರ ಮನೆಯಲ್ಲಿರುವುದು ನನಗೆ ಗೊತ್ತಿಲ್ಲವೆ? ಅವರ ಮೋಸದ ಅಳತೆಗಳನ್ನು ನಾನು ಒಪ್ಪುವುದು ಸಾಧ್ಯವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ; ಅಸಹ್ಯಕರವಾದ ಕಿರಿಯಳತೆ, ಇವು ಇನ್ನೂ ಸಿಕ್ಕುತ್ತಿವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕದ್ದುಕೊಂಡ ಭಂಡಾರಗಳನ್ನು ದುಷ್ಟರು ಇನ್ನೂ ಗುಪ್ತವಾಗಿಡುವರೋ? ಕೆಟ್ಟ ಜನರು ತಮ್ಮ ಚಿಕ್ಕ ಅಳತೆಯಿಂದ ಜನರನ್ನು ಇನ್ನೂ ಮೋಸಪಡಿಸುವರೋ? ಹೌದು, ಅವೆಲ್ಲವೂ ನಡಿಯುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದುಷ್ಟಮನೆತನವೇ ನೀನು ಕೆಟ್ಟದ್ದಾಗಿ ಸಂಪಾದಿಸಿದ್ದನ್ನು ಶಾಪಗ್ರಸ್ತರಾದ ಕಡಿಮೆ ಅಳತೆಯನ್ನು ನಾನು ಮರೆಯಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:10
21 ತಿಳಿವುಗಳ ಹೋಲಿಕೆ  

ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ.


ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.


ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.


ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.


ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.


ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.


ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.


ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.


ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.


ಅಷ್ದೋದಿನ ಅರಮನೆಗಳಲ್ಲಿಯೂ, ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ. ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ.


ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳೆಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು