ಮೀಕ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬೆಟ್ಟಗಳೇ, ಯೆಹೋವನ ವ್ಯಾಜ್ಯವನ್ನು ಕೇಳಿರಿ! ಭೂವಿುಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ; ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನಿಗೆ ತನ್ನ ಜನರ ವಿರುದ್ಧವಾಗಿ ವ್ಯಾಜ್ಯವಿದೆ. ಪರ್ವತಗಳೇ, ಭೂಮಿಯ ಅಸ್ತಿವಾರಗಳೇ ಯೆಹೋವನ ದೂರುಗಳನ್ನು ಕೇಳಿರಿ. ಇಸ್ರೇಲ್ ತಪ್ಪಿತಸ್ಥನೆಂದು ಆತನು ಧೃಡಪಡಿಸುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಬೆಟ್ಟಗಳೇ, ಯೆಹೋವ ದೇವರ ಆಪಾದನೆಯನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ ಕಿವಿಗೊಡಿರಿ. ಏಕೆಂದರೆ ಯೆಹೋವ ದೇವರಿಗೆ ತಮ್ಮ ಜನರ ವಿರುದ್ಧ ವ್ಯಾಜ್ಯವಿದೆ, ಅವರು ಇಸ್ರಾಯೇಲಿನ ವಿರುದ್ಧ ಆರೋಪಿಸುತ್ತಾರೆ. ಅಧ್ಯಾಯವನ್ನು ನೋಡಿ |