Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು, ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಹೇಳುವುದೇನೆಂದರೆ, “ನನ್ನ ಜನರೇ, ನಾನು ಮಾಡಿದ್ದೇನು ತಿಳಿಸಿರಿ. ನಿಮಗೆ ವಿರೋಧವಾಗಿ ನಾನು ಏನಾದರೂ ಮಾಡಿದ್ದೇನೋ? ನಿಮಗೆ ಜೀವಿಸಲು ಕಷ್ಟವಾಗುವಂತೆ ಮಾಡಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಜನರೇ, ನಾನು ನಿಮಗೆ ಏನು ಮಾಡಿದ್ದೇನೆ? ನಾನು ನಿಮ್ಮ ಮೇಲೆ ಭಾರ ಹಾಕಿದ್ದೇನೋ? ನನಗೆ ಉತ್ತರಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:3
11 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!


ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?


ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,


ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.


ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು