Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು; ಮೋಶೆಯನ್ನೂ ಆರೋನನನ್ನೂ ವಿುರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸತ್ವದ ದೇಶದೊಳಗಿಂದ ನಿನ್ನನ್ನು ವಿಮೋಚಿಸಿ, ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:4
29 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.


ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.


ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.


ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.


ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.


ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.


ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.


ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.


“ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.


ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.


ಅವನು ನಿನಗೆ ಬದಲಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತಿರುವಿ.


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.


ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.


ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ:


ಆಗ ಸಮುವೇಲನು, “ನಿಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರೆತರುವುದಕ್ಕಾಗಿ ಮೋಶೆ ಹಾಗೂ ಆರೋನರನ್ನು ನೇಮಿಸಿದ ಯೆಹೋವನೇ ಇದಕ್ಕೆ ಸಾಕ್ಷಿ.


ಇಸ್ರಾಯೇಲರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು