ಮೀಕ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದನ್ನೆಲ್ಲಾ ಸ್ಮರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |