Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ, ಯಾವದನ್ನರ್ಪಿಸಿ ಮಹೋನ್ನತದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನೂ ಒಂದು ವರುಷದ ಕರುಗಳನ್ನೂ ತೆಗೆದುಕೊಂಡುಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ? ಪರಲೋಕದ ದೇವರಿಗೆ ನಾನು ಅಡ್ಡಬಿದ್ದು ಆರಾಧಿಸುವಾಗ ಏನು ಮಾಡಲಿ? ನಾನು ಕರ್ತನ ಬಳಿಗೆ ಬರುವಾಗ ಸರ್ವಾಂಗಹೋಮದೊಡನೆ ಒಂದು ವರ್ಷದ ಕರುವನ್ನು ತೆಗೆದುಕೊಂಡು ಬರಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಯಾವುದರೊಂದಿಗೆ ಯೆಹೋವ ದೇವರ ಮುಂದೆ ಬಂದು, ಯಾವುದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಮತ್ತು ಒಂದು ವರ್ಷದ ಕರುಗಳ ಸಂಗಡ ಆತನ ಮುಂದೆ ಹೋಗಲೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:6
39 ತಿಳಿವುಗಳ ಹೋಲಿಕೆ  

ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.


ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.


ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,


ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.


ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.


ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,


ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.


ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.


‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.


ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.


ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.


ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,


ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು.


ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.


ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.


ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.


ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.


(ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು.


ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.


ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿನಿಂದ ಆರಾಧಿಸುವುದಕ್ಕೆ ಪ್ರವೇಶಿಸಿದವನು ದಕ್ಷಿಣ ಬಾಗಿಲಿಂದ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನಿಂದ ಪ್ರವೇಶಿಸಿದವನು ಉತ್ತರ ಬಾಗಿಲಿನಿಂದ ಹೊರಗೆ ಹೋಗಬೇಕು. ತಾನು ಪ್ರವೇಶಿಸಿದ ಬಾಗಿಲಿನಿಂದ ಹಿಂದಿರುಗದೆ ಅದಕ್ಕೆ ಎದುರಾಗಿರುವ ಬಾಗಿಲಿಂದ ಹೊರಗೆ ಹೋಗಬೇಕು.


ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.


ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.


ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು