Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಾವಿರಾರು ಟಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲಪ್ರವಾಹಗಳನ್ನು ನೋಡಿ ಸರ್ವೇಶ್ವರ ಮೆಚ್ಚುವುದುಂಟೆ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲುಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಾವಿರಾರು ಟಗರುಗಳನ್ನೂ ಲಕ್ಷೋಪಲಕ್ಷ ತೈಲಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚಾನೇ? ನನ್ನ ದ್ರೋಹದ ನಿವಿುತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ, ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರಾದ ಯೆಹೋವನು ಒಂದು ಸಾವಿರ ಟಗರು, ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಮೆಚ್ಚುವರೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನೂ ಕೊಡಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:7
29 ತಿಳಿವುಗಳ ಹೋಲಿಕೆ  

ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.


ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.


ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.


ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.


ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.


ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.


ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.


(ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು.


“‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.


ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ.


ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.


ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ.


ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.


ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.


ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.


ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು.


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.


ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.


ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು