Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ನನ್ನ ಗತಿಯನ್ನು ಏನೆಂದು ಹೇಳಲಿ! ಮಾಗಿದ ಹಣ್ಣನ್ನು ಕೊಯ್ದು ದ್ರಾಕ್ಷೆಯ ಹಕ್ಕಲನ್ನು ಆಯ್ದ [ತೋಟದ] ಸ್ಥಿತಿಗೆ ಬಂದಿದ್ದೇನೆ; ತಿನ್ನುವದಕ್ಕೆ ಗೊಂಚಲೇ ಇಲ್ಲ, ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಂತಹ ಸಂಕಟ ನನ್ನದು! ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವವರ ಹಾಗೆಯೂ ದ್ರಾಕ್ಷಿ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣುಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:1
14 ತಿಳಿವುಗಳ ಹೋಲಿಕೆ  

ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.


ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.


ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.


ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ,


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.


ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.


ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.


ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?


ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು