Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ನನ್ನ ಸಹೋದರರೇ, ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟುಮಾಡುತ್ತದೆಂದು ತಿಳಿದು ನೀವು ನಾನಾವಿಧವಾದ ಕಷ್ಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ಎಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಸಹೋದರ ಸಹೋದರಿಯರೇ, ನಿಮಗೆ ಅನೇಕ ತೊಂದರೆಗಳು ಬರುತ್ತವೆ. ಆದರೆ ಅವುಗಳು ಬಂದಾಗ ನೀವು ಬಹಳ ಸಂತೋಷಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಾಜ್ಯಾ ಭಾವಾನು, ಅನಿ ಭೆನಿಯಾನು ತುಮ್ಕಾ ಲೈ ತರಾಸಾ ಯೆತಾತ್, ಖರೆ ತೆ ಯೆಲ್ಲ್ಯಾ ತನ್ನಾ ತುಮಿ ಕುಶಿ ಹೊವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:2
21 ತಿಳಿವುಗಳ ಹೋಲಿಕೆ  

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.


ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.


ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.


ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.


ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.


ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.


ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಪಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು