Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮರುಕ್ಷಣವೇ ತಾನು ಹೇಗಿದ್ದೇನೆಂದು ಮರೆತುಬಿಡುವವನಿಗೆ ಸಮಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇವನು ತನ್ನನ್ನು ನೋಡಿಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವನು ಅಲ್ಲಿಂದ ಹೊರಟು ಹೋಗಿ, ತಾನು ಹೇಗಿದ್ದೇನೆಂಬುದನ್ನು ಬೇಗನೆ ಮರೆತುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಇವನು ತನ್ನನ್ನು ಕನ್ನಡಿಯಲ್ಲಿ ನೋಡಿಕೊಂಡು ಹೋಗಿದ್ದರೂ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅಪ್ನಾಚೊ ರುಪ್ ಆರ್ಶ್ಯಾತ್ ಬಗುನ್ ಘೆವ್ನ್ ಕಡೆಕ್ ಗೆಲ್ಲ್ಯಾ ತನ್ನಾ ಅಪ್ನಾಚೊ ರುಪ್ ಕಸೊ ಹೊತ್ತೊ ಮನ್ತಲೆ ತಾಬೊಡ್ತೊಬ್ ಇಸ್ರುನ್ ಸೊಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:24
8 ತಿಳಿವುಗಳ ಹೋಲಿಕೆ  

ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.


ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು.


ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು.


ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.


ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.


ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.


ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು.


ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು