Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದ್ದನ್ನು ಮರೆತುಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಲೊಕಾಕ್ನಿ ಸುಟ್ಕಾ ಕರ್ತಲ್ಯಾ ದೆವಾಚೊ ಪುರಾ ನಿಯಮ್ ಉಶ್ಯಾರ್ಕಿನ್ ಶಿಕ್ತಲೊ ಮಾನುಸ್ ಖರೆಚ್‍ಬಿ ಖುಶಿನ್ ಭರುನ್ ರ್‍ಹಾತಾ. ತೊ ತೆ ಶಿಕುನ್ಗೆತ್ ರ್‍ಹಾತಾ ತೊ ದೆವಾಚಿ ಗೊಸ್ಟಿಯಾ ಆಯಿಕ್ತಾ ಅನಿ ಅಪ್ನಿ ಆಯ್ಕಲ್ಲೆ ಇಸ್ರಿನಾ. ತೊ ದೆವಾಚ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲ್ತಾ ತಸೆ ಹೊವ್ನ್ ತೊ ಕುಶಿನ್ ಭರಲ್ಲೊ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:25
41 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.


ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ.


ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.


ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.


ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.


ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.


ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.


ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.


ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು.


ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು. ಹೇ.


ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು