Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅಮ್ಚ್ಯಾ ದೆವಾ ಬಾಬಾಚ್ಯಾ ಪರ್ಕಾರ್ ಪವಿತ್ರ್ ದೆವಸ್ಪಾನ್ ಮಟ್ಲ್ಯಾರ್, ಅನಾತ್ ಅನಿ ಘೊವ್ ಮರಲ್ಲ್ಯಾ ಬಾಯ್ಕಾಮನ್ಸಾಂಚ್ಯಾ ಕಸ್ಟಾತ್ನಿ ಪಾವ್ತಲೆ, ಅನಿ ಜಗಾತ್ಲೊ ಕೊನ್ಬಿ ತೆಂಕಾ ತರಾಸ್ ದಿ ನಸಿ ಸರ್ಕೆ ರಾಕುನ್ ಘೆವ್ನ್ ಜಾತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:27
36 ತಿಳಿವುಗಳ ಹೋಲಿಕೆ  

ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.


ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.


ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.


ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.


ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.


ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.


ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,


ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.


ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು