Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೀನದಲಿತನಾದ ಸಹೋದರನು, ದೇವರು ತನ್ನನ್ನು ಉನ್ನತ ಸ್ಥಿತಿಗೆ ಏರಿಸಿದಾಗ ಆನಂದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉತ್ತಮಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಡವನಾಗಿರುವ ವಿಶ್ವಾಸಿಯು ಹೆಮ್ಮೆಪಡಲಿ, ಏಕೆಂದರೆ ದೇವರು ಅವನನ್ನು ಆತ್ಮಿಕ ವಿಷಯದಲ್ಲಿ ಐಶ್ವರ್ಯವಂತನನ್ನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಗರಿಬ್ ಪಾನಾತ್ ಲೈ ಕಿಳ್ ಪಾನಾತ್ ಹೊತ್ತೊ ಭಾವ್ ಅಪ್ನಿ ಬರ್‍ಯಾ ಸ್ಥಿತಿ ಯೆಲೊ ಮನುನ್ ಖುಶಿ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:9
25 ತಿಳಿವುಗಳ ಹೋಲಿಕೆ  

ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.


ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.


ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.


ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.


ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.


ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.


ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.


ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು