Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನ್ನ ಸಹೋದರರೇ, ಮಹಿಮಾನ್ವಿತ ಪ್ರಭು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟಿರುವ ನೀವು ಪಕ್ಷಪಾತ ಮಾಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಸಹೋದರರೇ, ಪ್ರಭಾವವುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾನು ಅನಿ ಭೆನಿಯಾನು, ಮಹಿಮೆನ್ ಭರಲ್ಲ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವರ್ತಿ ತುಮಿ ವಿಶ್ವಾಸ್ ಥವಲ್ಲ್ಯಾನು, ತುಮ್ಚ್ಯಾ ಮದ್ದಿ ಪಕ್ಷಪಾತ್ ರ್‍ಹಾವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:1
29 ತಿಳಿವುಗಳ ಹೋಲಿಕೆ  

ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.


ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


“‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.


ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.


ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.


ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.


ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;


ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,


ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.


ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.


ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.


ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;


ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,


ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.


ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು