Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಉದಾಹರಣೆಗೆ: ಇಬ್ಬರು ನಿಮ್ಮ ಪ್ರಾರ್ಥನಾಲಯಕ್ಕೆ ಬಂದರೆಂದು ಇಟ್ಟುಕೊಳ್ಳಿ. ಅವರಲ್ಲಿ ಒಬ್ಬನು ಚಿನ್ನದುಂಗುರವನ್ನು ತೊಟ್ಟು, ಸೊಗಸಾದ ಉಡುಪನ್ನು ಧರಿಸಿದವನು. ಮತ್ತೊಬ್ಬನು ಹರಕುಬಟ್ಟೆಯನ್ನು ಉಟ್ಟ ಬಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಶೋಭಾಯಮಾನವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭಾಮಂದಿರದೊಳಗೆ ಬರಲು ಮತ್ತು ಒಬ್ಬ ಬಡಮನುಷ್ಯನು ಹೀನವಾದ ಬಟ್ಟೆಹಾಕಿಕೊಂಡು ಬರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ಸಭೆಗೆ ಒಬ್ಬನು ಬರುತ್ತಾನೆಂದು ನೆನೆಸಿರಿ. ಅವನು ಒಳ್ಳೆಯ ವಸ್ತ್ರಗಳನ್ನೂ ಬಂಗಾರದ ಉಂಗುರವನ್ನೂ ಧರಿಸಿರುತ್ತಾನೆ. ಅದೇ ಸಮಯಕ್ಕೆ ಕೊಳೆಯಾದ ಮತ್ತು ಹಳೆಯದಾದ ವಸ್ತ್ರಗಳನ್ನು ಧರಿಸಿರುವ ಒಬ್ಬ ಬಡವನೂ ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಹರಕು ಬಟ್ಟೆ ಹಾಕಿಕೊಂಡು ಬರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್, ತುಮಿ ಗೊಳಾ ಹೊತಲ್ಯಾ ಜಾಗ್ಯಾರ್ ಎಕ್ಲೊ ಸಾವ್ಕಾರ್ ಬರೆ ಕಪ್ಡೆ ನೆಸುನ್ ಅನಿ ಸೊನ್ಯಾಚ್ಯಾ ಮುದ್ದಿಯಾ ನೆಸುನ್ ಯೆಲ್ಲೊ ರ್‍ಹಾತಾ, ತನ್ನಾಚ್ ತ್ಯಾ ಎಳಾರ್ ಎಕ್ಲೊ ಗರಿಬ್ ಮಾನುಸ್ ಮಾಟಿ ಲಾಗಲ್ಲೆ ಅನಿ ಜುನ್ನೆ ಕಪ್ಡೆ ನೆಸುನ್ ಯೆಲ್ಲೊ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:2
9 ತಿಳಿವುಗಳ ಹೋಲಿಕೆ  

ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,


ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.


ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.


ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.


ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು