Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಮ್ಮ ಪಿತಾಮಹ ಅಬ್ರಹಾಮನು ದೇವರೊಂದಿಗೆ ಸತ್ಸಂಬಂಧವನ್ನು ಪಡೆದುದ್ದಾದರೂ ಹೇಗೆ? ತನ್ನ ಮಗ ಇಸಾಕನನ್ನು ದೇವರಿಗೆ ಬಲಿಯಾಗಿ ಸಮರ್ಪಿಸಿದ ಸತ್ಕ್ರಿಯೆಯಿಂದಲ್ಲವೇ? ವಿಶ್ವಾಸವು ಸತ್ಕ್ರಿಯೆಗಳಿಂದ ಸಚೇತನಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಮ್ಮ ಪಿತೃವಾದ ಅಬ್ರಹಾಮನು ಇಸಾಕನೆಂಬ ತನ್ನ ಮಗನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಬ್ರಹಾಮನು ನಮ್ಮ ಪಿತೃ. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾದನು. ಅವನು ಯಜ್ಞವೇದಿಕೆಯ ಮೇಲೆ ತನ್ನ ಮಗನಾದ ಇಸಾಕನನ್ನು ದೇವರಿಗೆ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ನೀತಿನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅಮ್ಚ್ಯಾ ವಾಡ್ ವಡ್ಲಾ ಅಬ್ರಾಹಾಮಾನ್ ಅಪ್ನಾಚ್ಯಾ ಲೆಕಾಕ್ ಇಸಾಕಾಕ್ ಅಲ್ತಾರಿ ವರ್ತಿ ಭೆಟ್ವುತಾನಾ, ತ್ಯಾ ತೆಚ್ಯಾ ಕಾಮಾಕ್ ಲಾಗುನ್ ತೊ ನಿತಿವಂತ್ ಮನುನ್ ಹೊಲೆ ಹೊಯ್ ಕಾಯ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:21
21 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.


ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.


ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.


ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.


ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.


ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?


ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;


ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.


ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.


‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.


ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.


ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು