Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇದೇ ರೀತಿಯಾಗಿ ರಹಾಬಳೆಂಬ ಜಾರಿಣಿ ಗೂಢಚಾರರನ್ನು ತನ್ನ ಮನೆಗೆ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಸಾಗಕಳುಹಿಸಿದಳು. ಈ ಸತ್ಕ್ರಿಯೆಯಿಂದಲೇ ದೇವರೊಡನೆ ನೀತಿಯುತ ಸಂಬಂಧವನ್ನು ಪಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದೇ ರೀತಿಯಾಗಿ ಸೂಳೆಯಾದ ರಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿವಂತಳೆಂಬ ನಿರ್ಣಯವನ್ನು ಹೊಂದಿದಳಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದೇ ರೀತಿಯಾಗಿ ರಹಾಬಳೆಂಬ ವೇಶ್ಯೆಯು ಸಹ ಗೂಢಚಾರರನ್ನು ಸೇರಿಸಿಕೊಂಡು, ಅವರನ್ನು ಬೇರೆ ದಾರಿಯಿಂದ ಕಳುಹಿಸಿದ ಕ್ರಿಯೆಗಳಿಂದಲೇ ಆಕೆಯು ನೀತಿನಿರ್ಣಯವನ್ನು ಹೊಂದಿದಳಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆಚ್ ವೆಭಿಚಾರ್ ಕರ್ತಲ್ಯಾ ರಾಹಾಬ್ ಮನ್ತಲ್ಯಾ ಬಾಯ್ಕೊಮನ್ಸಿಕ್ ತಿಚ್ಯಾ ಕಾಮಾಂಚ್ಯಾ ವೈನಾ ನಿತಿವಂತ್ ಮನುನ್ ಎಚುನ್ ಹೊಲೆ ನ್ಹಯ್? ತಿನಿ ಖಬರ್ ದಿತಲ್ಯಾಕ್ನಿ ಸ್ವಾಗತ್ ಕರ್ಲಿನ್ ಅನಿ ಎಕ್ ದುಸ್ರ್ಯಾಚ್ ವಾಟೆನ್ ತೆಂಕಾ ಧಾಡುನ್ ದಿಲಿನ್, ಅಶೆ ತಿಚ್ಯಾ ಹ್ಯಾ ಕಾಮಾಂಚ್ಯಾ ವೈನಾ ತಿಕಾ ನಿತಿವಂತ್ ಮನುನ್ ಎಚುನ್ ಕಾಡುನ್ ಹೊಲೆ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:25
15 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.


ಅವಳ ಮನೆಯು ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ


ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳಲು ಬಂದವರಿಗೆ, “ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬುದು ನನಗೆ ತಿಳಿಯಲಿಲ್ಲ.


ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.


ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು.


ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ.


ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.


ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳ ಮಧ್ಯದಲ್ಲಿ ಬಚ್ಚಿಟ್ಟಿದ್ದಳು.


“ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿ ಹೋಗಿ ಅಲ್ಲಿ ಮೂರು ದಿನ ಅಡಗಿಕೊಂಡಿದ್ದು, ತರುವಾಯ ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ” ಎಂದಳು.


ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.


ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು