Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ ವೈನಾ ಯೆಲ್ಲಿ ಬುದ್ವಂತ್ಕಿ; ಸಾದಿ, ಶಾಂತ್ಪಾನಾಚಿ, ಸೊಸುನ್ ಘೆತಲಿ, ನಾಜುಕ್ ಮನಾಚಿ, ದಯಾ ಅನಿ ಬರ್‍ಯಾ ಕಾಮಾಚ್ಯಾ ವರ್ತಿ ಠಿಕುನ್ ರಾತಲಿ, ತಿ ಭೆದ್ ಭಾವ್ ಕರಿನಾ ಅನಿ ಕುಸ್ಡೆಪಾನ್ ಕರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:17
63 ತಿಳಿವುಗಳ ಹೋಲಿಕೆ  

ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.


ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.


ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.


ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ


ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.


ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?


ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು


ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.


ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.


ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.


ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.


“ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.


ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.


ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.


ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.


ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.


ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.


ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ?


ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.


ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ,


ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು