ಯಾಕೋಬನು 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂತೆಯೇ, ಹಡಗು ಎಷ್ಟೇ ದೊಡ್ಡದಿರಲಿ, ಎಂತಹ ಬಿರುಗಾಳಿಯ ಬಡಿತಕ್ಕೇ ಸಿಕ್ಕಿರಲಿ, ಕೇವಲ ಒಂದು ಚಿಕ್ಕ ಚುಕ್ಕಾಣಿಯಿಂದ ನಾವಿಕನು ತನಗೆ ಇಷ್ಟಬಂದ ಕಡೆಗೆ ಅದನ್ನು ತಿರುಗಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹಡಗುಗಳನ್ನು ನೋಡಿರಿ. ಅವು ಬಹು ದೊಡ್ಡವು, ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ನಡಿಸುವವನು ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇದೇ ನಿಯಮ ಹಡಗುಗಳಿಗೂ ಅನ್ವಯಿಸುತ್ತದೆ. ಹಡಗು ಬಹಳ ದೊಡ್ಡದಾಗಿರುತ್ತದೆ ಮತ್ತು ಬಲವಾದ ಗಾಳಿಯು ಅದನ್ನು ತಳ್ಳಿಕೊಂಡು ಹೋಗುತ್ತದೆ. ಆದರೆ ಒಂದು ಸಣ್ಣ ಚುಕ್ಕಾಣಿಯು ಆ ದೊಡ್ಡ ಹಡಗನ್ನು ನಿಯಂತ್ರಿಸುತ್ತದೆ. ಚುಕ್ಕಾಣಿಯನ್ನು ಹತೋಟಿಯಲ್ಲಿ ಇಟ್ಟುಕೊಂಡಿರುವವನು ಹಡಗು ಹೋಗಬೇಕಾದ ಮಾರ್ಗವನ್ನು ತೀರ್ಮಾನಿಸುತ್ತಾನೆ. ಅವನ ಅಪೇಕ್ಷೆಯಂತೇ ಹಡಗು ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹಡಗುಗಳ ಉದಾಹರಣೆಯೂ ಅದರಂತೆ ಇದೆ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ನಡೆಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ಅವುಗಳನ್ನು ತಿರುಗಿಸುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ನಾ ಹೊಲ್ಲ್ಯಾರ್, ಮೊಟ್ಯಾ ಢೊನಿಚ್ಯಾ ವಿಶಯಾತ್ ಚಿಂತುನ್ ಬಗಾ, ಢೊನ್ ಲೈ ಮೊಟಿ ರ್‍ಹಾತಾ ಅನಿ ವಾರೆ ತೆಕಾ ಹುಡ್ವುನ್ ನ್ಹೆತಾ, ಖರೆ ಎಕ್ ಬಾರಿಕ್ ಢೊನಿಚೆ ದಿಕ್ಕಾ ಬದಲ್ತಲೆ ವಸ್ತು ಸಗ್ಳ್ಯಾ ಮೊಟ್ಯಾ ಢೊನಿಕ್ ಹತೊಟಿತ್ ಥವ್ನ್ ಘೆತಾ ಅನಿ ತೊ ಚಾಲ್ವುತಲೊ ಅಪ್ನಾಕ್ ಪಾಜೆ ತಸೆ ಢೊನಿಕ್ ಚಾಲ್ವುನ್ ಘೆವ್ನ್ ಜಾತಾ. ಅಧ್ಯಾಯವನ್ನು ನೋಡಿ |