Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದ್ದರಿಂದ ನೀವು ಅಂಥ ಮಾತನ್ನು ಬಿಟ್ಟು, “ಪ್ರಭುವಿನ ಚಿತ್ತವಿದ್ದರೆ ನಾವು ಬದುಕಿರುತ್ತೇವೆ, ಇಂಥಿಂಥದ್ದನ್ನು ಮಾಡುತ್ತೇವೆ,” ಎಂದು ನೀವು ಹೇಳುವುದೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದದರಿಂದ ನೀವು ಅಂಥ ಮಾತನ್ನು ಬಿಟ್ಟು ದೇವರ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ, ನೀವು ಹೀಗೆ ಹೇಳಬೇಕು, “ಪ್ರಭುವು ಇಚ್ಛೆಪಟ್ಟರೆ, ನಾವು ಜೀವಿಸಿರುತ್ತೇವೆ. ಇಂಥಿಂಥದ್ದನ್ನು ಮಾಡುತ್ತೇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ, “ಕರ್ತದೇವರ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ, ಆ ಕೆಲಸವನ್ನಾಗಲಿ ಮಾಡುವೆವು!” ಎಂದು ನೀವು ಹೇಳುವುದೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಧನಿಯಾಚಿ ಮರ್ಜಿ ಹೊಯ್ ಹೊಲ್ಯಾರ್ ಅಮಿ ಅಸೆ ಜಿವನ್ ಕರ್ತಾಂವ್ ಅನಿ ಹೆ ಅಮಿ ಕರ್ತಾಂವ್, ತೆ ಸಗ್ಳೆ ಕರ್ತಾಂವ್ ಮನುನ್ ಸಾಂಗುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:15
10 ತಿಳಿವುಗಳ ಹೋಲಿಕೆ  

ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


ದೇವರು ಅನುಮತಿಸುವುದಾದರೆ ನಾವು ಇವುಗಳನ್ನು ಮಾಡುವೆವು.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,


ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.


ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ.


ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿಹೊಂದಲಾಗುವುದು.


ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.


ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು