ಯಾಕೋಬನು 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ವಿಶ್ವಾಸಾನ್ ನಸಲ್ಲ್ಯಾ ಲೊಕಾನು! ಹ್ಯಾ ಜಗಾ ವೈರ್ ಆಶಾ ಕರ್ತಲೆ ಮಟ್ಲ್ಯಾರ್ ದೆವಾಚೊ ದುಸ್ಮನ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ಜಗಾಚೊ ಪ್ರೆಮ್ ಕರ್ತಲೊ, ಅಪ್ನಾಕ್ ದೆವಾಚೊ ದುಸ್ಮಾನ್ ಕರುನ್ ಘೆತಾ. ಅಧ್ಯಾಯವನ್ನು ನೋಡಿ |