Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮಲ್ಲಿ ಬಾಧೆಪಡುವವನು ಇದ್ದಾನೋ? ಅವನು ದೇವರನ್ನು ಪ್ರಾರ್ಥಿಸಲಿ. ನಿಮ್ಮಲ್ಲಿ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆ ಹಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮಲ್ಲಿ ತೊಂದರೆಗೆ ಒಳಗಾಗಿರುವವನು ಪ್ರಾರ್ಥಿಸಬೇಕು. ನಿಮ್ಮಲ್ಲಿ ಸಂತೋಷದಿಂದಿರುವವನು ಹಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷ ಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮ್ಚ್ಯಾತ್ಲೊ ಕೊನ್‌ಬಿ ತರಾಸಾತ್ ರ್‍ಹಾಲ್ಯಾರ್? ತೆನಿ ಮಾಗ್ನಿ ಕರುಚೆ. ತುಮ್ಚ್ಯಾತ್ಲೆ ಕೊನ್ ಕುಶಿನ್ ಹಾಯ್, ತೆನಿ ಸುತ್ತಿಚಿ ಗಿತಾ ಗಾವುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:13
34 ತಿಳಿವುಗಳ ಹೋಲಿಕೆ  

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.


“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.


ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.


ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.


ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.


ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.


“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.


ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.


ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.


ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.


ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು.


ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.


ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ.


ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.


ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು