ಯಾಕೋಬನು 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮ್ಮ ಬೆಳ್ಳಿಬಂಗಾರಕ್ಕೆ ತುಕ್ಕುಹಿಡಿದಿದೆ. ಆ ತುಕ್ಕೇ ನಿಮಗೆ ವಿರುದ್ಧ ಸಾಕ್ಷಿಯಾಗಿ ನಿಮ್ಮನ್ನು ಬೆಂಕಿಯಂತೆ ದಹಿಸಿಬಿಡುತ್ತದೆ. ಅಂತ್ಯಕಾಲಕ್ಕಾಗಿ ನೀವು ಬೆಂಕಿಯನ್ನೇ ಶೇಖರಿಸಿಟ್ಟುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ಮಣ್ಣೇ ನಿಮಗೆ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ನುಂಗಿಬಿಡುವದು. ಅಂತ್ಯದಿವಸಗಳು ಬಂದರೂ ದ್ರವ್ಯವನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿಮ್ಮ ಬೆಳ್ಳಿಬಂಗಾರಗಳು ತುಕ್ಕು ಹಿಡಿಯುತ್ತವೆ. ನೀವು ತಪ್ಪಿತಸ್ಥರೆಂಬುದಕ್ಕೆ ಅದೇ ಸಾಕ್ಷಿಯಾಗಿದೆ. ಅವುಗಳ ತುಕ್ಕು ನಿಮ್ಮ ದೇಹವನ್ನು ಬೆಂಕಿಯಂತೆ ತಿಂದುಬಿಡುತ್ತವೆ. ನೀವು ಈ ಕೊನೆಯ ದಿನಗಳಲ್ಲಿ ನಿಮ್ಮ ಭಂಡಾರವನ್ನು ತುಂಬಿಸಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದಿವೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದುಬಿಡುವುದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತುಮ್ಚ್ಯಾ ಸೊನ್ಯಾಕ್ ಅನಿ ಚಾಂದಿಕ್ ಜಂಕ್ ಧರ್ಲಾ, ಹೆ ಜಂಕ್ ತುಮ್ಚ್ಯಾ ವಿರೊದ್ ಎಕ್ ಸಾಕ್ಷಿ ಹೊವ್ನ್ ರ್‍ಹಾತಾ ಅನಿ ತೆ ಅಗಿ ಸಾರ್ಕೆ ತುಮ್ಚೆ ಮಾಸ್ ಖಾತಾ. ಆಕ್ರಿಚ್ಯಾ ದಿಸಾ ಸಾಟ್ನಿ ತುಮಿ ತುಮ್ಚಿ ಕಪಾಟಾತ್ ಭರುನ್ ಥವ್ಲ್ಯಾಸಿ. ಅಧ್ಯಾಯವನ್ನು ನೋಡಿ |