Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀತಿವಂತನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಕೊಂದುಹಾಕಿದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಒಳ್ಳೆಯ ಜನರಿಗೆ ದಂಡನೆ ವಿಧಿಸಿದಿರಿ. ಅವರು ನಿಮಗೆ ವಿರೋಧವಾಗಿಲ್ಲದಿದ್ದರೂ ಅವರನ್ನು ಕೊಂದುಹಾಕಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ಮನ್ನು ವಿರೋಧ ಮಾಡದ ನಿರ್ದೋಷಿಗೆ ದಂಡನೆಯನ್ನು ವಿಧಿಸಿ, ಕೊಂದುಹಾಕಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮಿ ಕಸ್ಲ್ಯಾಬಿ ಕಾಯ್ ಚುಕೆತ್ ನಸಲ್ಲ್ಯಾ ಲೊಕಾಕ್ನಿ ಚುಕಿದಾರ್ ಮನುನ್ ಕರ್ಲ್ಯಾಸಿ ಅನಿ ಜಿವಾನಿ ಮಾರ್ಲ್ಯಾಸಿ ಅನಿ ತೆನಿ ತುಮ್ಕಾ ಅಡ್ವುಕ್‍ನಾತ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:6
24 ತಿಳಿವುಗಳ ಹೋಲಿಕೆ  

ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.


ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.


ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.


ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”


“ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.


ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.


ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!


ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು