Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಒಬ್ಬನು ಆಡನ್ನಾಗಲಿ ಕುರಿಯನ್ನಾಗಲಿ ಸರ್ವಾಂಗಹೋಮ ಮಾಡಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:10
22 ತಿಳಿವುಗಳ ಹೋಲಿಕೆ  

ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.


ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.


ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.


ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.


ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.


ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.


“ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು


“‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.


ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.


“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.


ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.


“ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.


ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.


ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.


ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.


ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಟಗರನ್ನು ತರಬೇಕು.


“ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು