ಯಾಜಕಕಾಂಡ 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯಾಜಕನು ಆ ಹಕ್ಕಿಯ ದೇಹವನ್ನು ಇಬ್ಭಾಗವಾಗಿ ಸೀಳಲಿ; ಒಂದೊಂದು ಭಾಗದಲ್ಲಿ ಒಂದು ರೆಕ್ಕೆ ಇರುವಂತೆ ಸೀಳಲಿ. ಅನಂತರ ಅದನ್ನು ಬಲಿಪೀಠದ ಮೇಲಿನ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಲಿ. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ಆ ಪಕ್ಷಿಯನ್ನು ರೆಕ್ಕೆಗಳ ಸಂದುಗಳಲ್ಲಿ ಹರಿಯಬೇಕು, ಆದರೆ ರೆಕ್ಕೆಗಳನ್ನು ಪೂರಾ ಕಿತ್ತು ಹಾಕಕೂಡದು. ಅನಂತರ ಅವನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಕಿತ್ತುಹಾಕಬೇಕು. ಆದರೆ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು. ಅಧ್ಯಾಯವನ್ನು ನೋಡಿ |