Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:3
79 ತಿಳಿವುಗಳ ಹೋಲಿಕೆ  

ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.


ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ.


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.


ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.


ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.


ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.


“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.


ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ,


“‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.


ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.


ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.


ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.


ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.


ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.


ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.


ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.


ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.


ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು.


ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.


ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,


ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.


ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.


ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.


ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು.


ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


“‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.


ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.


ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.


ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.


ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.


ಬಿಳಾಮನ ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ. ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಸರ್ವಾಂಗ ಹೋಮಗಳನ್ನು ಸಮರ್ಪಿಸುವಾಗ, ರಕ್ತ ಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನ ಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು.


ತರುವಾಯ ಬಾಲಾಕನು ಬಿಳಾಮನಿಗೆ, “ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು” ಎಂದು ಹೇಳಿದನು.


“‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


ಅನಂತರ ಯೆಹೋವನು ಮೋಶೆಗೆ,


“ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ,


ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,


“‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,


ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.


ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.


“‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.


“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.


ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.


“ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,


ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.


“ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.


ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.


ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.


“ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.


“‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.


ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.


ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’”


ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.


ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.


ಲೇವಿಯರು ಚರ್ಮ ಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು