Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅರ್ಪಿಸುವವನು ಆ ಪ್ರಾಣಿಯ ತಲೆಯ ಮೇಲೆ ಕೈಯಿಡಬೇಕು. ಆಗ ಅದು ಅವನ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಅಂಗೀಕೃತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಆ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದಕ್ಕಾಗಿ ಅಂಗೀಕಾರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:4
44 ತಿಳಿವುಗಳ ಹೋಲಿಕೆ  

ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.


ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.


ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.


ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.


ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.


ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.


ಆ ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.


ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.


ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,


ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.


ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.


ಆಗ ಮೋಶೆ ಆರೋನನಿಗೆ, “ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು” ಎಂದು ಹೇಳಿದನು.


ಆ ಮೇಲೆ ಅವನು ಯಾಜಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು.


ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.


ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.


ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.


ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.


ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.


ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.


ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.


ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.


ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.


“ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.


“ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.


ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.


ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.


ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು.


ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.


ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.


ಲೇವಿಯರನ್ನು ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.


ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ.


ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು